ಸೌಹಾರ್ದ ಸಹಕಾರಿಗಳಿಗೆ ತರಬೇತಿ ಕಾರ್ಯಕ್ರಮ

Update: 2019-06-20 13:36 GMT

ಉಡುಪಿ, ಜೂ.20: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ನಿಯಮಿತ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳಿಗಾಗಿ ವಿಷಯಾಧಾರಿತ ತರಬೇತಿ ಕಾರ್ಯಕ್ರಮವನ್ನು ಉಡುಪಿಯ ಅನುಗ್ರಹ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವೆಂಕಟರಮಣ ವಿ. ಸೌಹಾರ್ದ ಸಹಕಾರಿ ಅಧ್ಯಕ್ಷ ಸತ್ಯೇಂದ್ರ ಪೈ ಮಾತನಾಡಿ, ಸಹಕಾರಿಗಳು ಈಗಿನ ವಿದ್ಯಮಾನದಲ್ಲಿ ಆರ್ಥಿಕತೆಯ ಜೊತೆಗೆ ಸಾಮಾಜಿಕವಾಗಿ ಅತ್ಯಂತ ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮೈಸೂರು ಪ್ರಾಂತೀಯ ನಿರ್ದೇಶಕ ಮಂಜುನಾಥ್ ಎಸ್.ಕೆ. ಮಾತನಾಡಿ ಸಹಕಾರಿಗಳು ಪ್ರಸ್ತುತ ಬದಲಾಗುತ್ತಿರುವ ಆರ್ಥಿಕ ಸ್ಥಿತಿ ಗಳಿಗೆ ಒಗ್ಗಿಕೊಂಡು ತಮ್ಮ ಸದಸ್ಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಅವರನ್ನ ಸಧೃಡವಾಗಿರುವ ಕಾರ್ಯಗಳಲ್ಲಿ ತೊಡಗಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲ ಅನೂಪ್ ದೇಶಪಾಂಡೆ ಧಾರವಾಡ ಹಾಗೂ ಸಹಕಾರಿಗಳ ಸಹಾಯಕ ನಿಬಂಧಕ ಮಂಜುನಾಥ್ ಸಿಂಗ್ ಭಾಗವಹಿ ಸಿದ್ದರು. ಹಿರಿಯ ಅಧಿಕಾರಿಗಳಾದ ಗುರುಪ್ರಸಾದ್ ಬಂಗೇರ, ಉಡುಪಿ ಜಿಲ್ಲಾ ಸೌಹಾರ್ದ ಸಂಯೋಜಕ ವಿಜಯ್ ಬಿ.ಎಸ್., ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭುವನೇಶ್ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News