ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮ

Update: 2019-06-20 16:32 GMT

ಉಡುಪಿ, ಜೂ.20: ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆದ ತರಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಬ್ರಹ್ಮಾವರ ಡಿಪ್ಲೋಮ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸುಧೀರ್ ಕಾಮತ್ ತಿಳಿಸಿದ್ದಾರೆ.

ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ, ಜ್ಞಾನ ವಿಕಾಸ ಕೇಂದ್ರ ಸಮನ್ವಯ ಸಮಿತಿ ಕರ್ಜೆ ಮತ್ತು ಉಪ್ಪಿನಕೋಟೆ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಡುಪಿ ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ನೇತ್ರಾವತಿ, ಜ್ಞಾನ ವಿಕಾಸ ಕೇಂದ್ರದ ಕಾರ್ಯಚಟುವಟಿಕೆಗಳು ಮತ್ತು ಮಹಿಳೆಯರ ಸಬಲೀಕರಣ ದಲ್ಲಿ ಸಮಿತಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ವಿವರಿಸಿದರು. ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಕೃಷಿ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾದ್ಯಾಪಕ ಡಾ. ವಿನೋದ್ ಮಾತನಾಡಿ, ಕುಟುಂಬದ ಆರೋಗ್ಯದಲ್ಲಿ ಮಹಿಳೆಯರ ಪಾತ್ರ ಹಾಗೂ ಅರೋಗ್ಯವಾದ ದೇಶವನ್ನು ಕಟ್ಟುವಲ್ಲಿ ಮಹಿಳೆುರ ಪಾತ್ರ ಮುಖ್ಯವಾಗಿದೆ ಎಂದರು.

ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋನಾಕೇಂದ್ರಕೃಷಿಇಂಜಿನಿಯರಿಂಗ್‌ವಿಾಗದ ಸಹ ಪ್ರಾದ್ಯಾಪಕ ಡಾ. ವಿನೋದ್ ಮಾತನಾಡಿ, ಕುಟುಂಬದ ಆರೋಗ್ಯದಲ್ಲಿ ಮಹಿಳೆಯರ ಪಾತ್ರ ಹಾಗೂ ಅರೋಗ್ಯವಾದ ದೇಶವನ್ನು ಕಟ್ಟುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆವಿಕೆಯ ಮುಖ್ಯಸ್ಥ ಡಾ.ಬಿ. ಧನಂಜಯ, ಕೃಷಿ ವಿಜ್ಞಾನ ಕೇಂದ್ರದಿಂದ ಪ್ರತಿ ವರ್ಷವೂ ಈ ರೀತಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದರಲ್ಲಿ ರೈತರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. 

ವಿಜ್ಞಾನಿ (ತೋಟಗಾರಿಕೆ) ಚೈತನ್ಯ ಹೆಚ್. ಎಸ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News