ಶಾಸಕ ಡಾ.ಕೆ.ಸುಧಾಕರ್ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕ

Update: 2019-06-20 16:48 GMT

ಬೆಂಗಳೂರು, ಜೂ.20: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಕೆ.ಸುಧಾಕರ್ ಅವರಿಗೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಐಎಎಸ್ ನಿವೃತ್ತ ಅಧಿಕಾರಿ ಸಿ.ಜಯರಾಮ್ ಅವರಿಗೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರನ್ನಾಗಿ, ಶಾಸಕ ವೆಂಕಟರಮಣಯ್ಯ ಅವರನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಹಾಗೂ ಶಾಸಕ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ ಅವರನ್ನು ಉಪನಗರ ವರ್ತುಲ ರಸ್ತೆ(ಎಸ್.ಟಿ.ಆರ್.ಆರ್) ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸಂಪುಟದರ್ಜೆ ಸ್ಥಾನಮಾನದೊಂದಿಗೆ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಿ, ನಂತರ ಘಟನೋತ್ತರ ಅನುಮೋದನೆಯನ್ನು ಪಡೆಯಲು ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News