ಜೂ. 21: ಎಸ್ ಡಿ ಪಿ ಐ ಸಂಸ್ಥಾಪನಾ ದಿನ

Update: 2019-06-20 17:41 GMT

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ರಾಜಕೀಯ ಪಕ್ಷವಾಗಿ 10 ವರ್ಷಗಳನ್ನು ಕಳೆದು 11ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ 10 ವರ್ಷಗಳ ಜನಪರ ರಾಜಕೀಯ ಎಂಬ ಘೋಷಣೆಯೊಂದಿಗೆ ಪಕ್ಷದ ಸಂಸ್ಥಾಪನಾ ದಿನ ಆಚರಿಸುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಎಲ್ಲಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಧ್ವಜಾರೋಹನ, ಸ್ನೇಹ ಸಮ್ಮಿಲನ , ಸಮಾಜ ಸೇವೆ, ವನಮಹೋತ್ಸವ ಮತ್ತು ಇನ್ನಿತರ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News