ಬ್ರಹ್ಮಾವರ: ನಿರ್ಮಲ ಶಾಲೆಯಲ್ಲಿ ಯೋಗ ದಿನಾಚರಣೆ

Update: 2019-06-21 15:04 GMT

ಬ್ರಹ್ಮಾವರ, ಜೂ.21: ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ವಿಶ್ವ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ಶಿಕ್ಷಕಿಯಾಗಿ ದಮಯಂತಿ ಅವರು ಶಾಲಾ ವಿದ್ಯಾರ್ಥಿಗಳಿಗೆ ಯೋಗ ಉಸ್ತುವಾರಿಯನ್ನು ವಹಿಸಿಕೊಂಡರು.

ಶಾಲೆಯ ಎಲ್ಲಾ ಶಿಕ್ಷಕಿಯರ ಉಪಸ್ಥಿತಿಯಲ್ಲಿ 1ರಿಂದ 10ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೂ ಶಾಲಾ ಸಭಾಂಗಣದಲ್ಲಿ ಒಟ್ಟು ಸೇರಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ದಮಯಂತಿ ಅವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯರಾದ ವಂ.ಜೋಸ್ಲಿ ಡಿಸಿಲ್ವ ಮಾತನಾಡಿ, ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡುವಲ್ಲಿ ಯೋಗ ಸಹಕಾರಿ. ಧ್ಯಾನದಿಂದ ಏಕಾಗ್ರತೆ ಮೂಡಿ, ಬುದ್ಧಿ ಚುರುಕು ಗೊಳ್ಳುತ್ತದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News