×
Ad

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ; ತಕ್ಷಣ ನೊಂದಣಿಗೆ ಸೂಚನೆ

Update: 2019-06-21 22:05 IST

ಉಡುಪಿ, ಜೂ.21: ಭಾರತ ಸರಕಾರವು ರೈತರ ಆದಾಯ ವೃದ್ಧಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN ) ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯಡಿ ಭೂ-ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು 6000 ರೂ.ಗಳನ್ನು ನೀಡಲು ಉದ್ದೇಶಿಸಲಾಗಿದೆ.

ಇದಕ್ಕಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ (ಗ್ರಾಪಂ), ಅಟಲ್‌ಜಿ ಜನಸ್ನೇಹಿ ಕೇಂದ್ರ, ನಾಡಾ ಕಚೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ತೆರಳಿ ಸ್ವಯಂ ಘೋಷಣೆ ಅನುಬಂಧದಲ್ಲಿ ತಮ್ಮ ಹೆಸರು, ಆಧಾರ್ ಸಂಖ್ಯೆ, ಜಮೀನಿನ ವಿವರಗಳನ್ನು ನಮೂದಿಸಿ, ಸ್ವಯಂ ಘೋಷಣೆಯನ್ನು ಜೂನ್ 30ರೊಳಗೆ ನೀಡುವಂತೆ ತಿಳಿಸಲಾಗಿದೆ.

ಅರ್ಹ ರೈತರು ಜೂನ್ 30ರ ಒಳಗೆ ಯೋಜನೆಗೆ ನೋಂದಣಿ ಮಾಡಿ ಕೊಳ್ಳದಿದ್ದರೆ ಅವರು ಒಂದನೆ ಕಂತಿನ ಸಹಾಯಧನದಿಂದ ವಂಚಿತರಾಗ ಬಹುದು. ಆದ್ದರಿಂದ ರೈತರು ಕೊನೆಯ ದಿನಾಂಕದೊಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News