ಐಬಿಪಿಎಸ್ ಪರೀಕ್ಷೆ: ಉಚಿತ ಪರೀಕ್ಷಾ ಪೂರ್ವ ತರಬೇತಿ
Update: 2019-06-21 22:47 IST
ಮಂಗಳೂರು, ಜೂ.21: ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್‌ನಲ್ಲಿ ನಡೆಸಲು ಉದ್ದೇಶೀಸಿರುವ ಐಬಿಪಿಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3ರಿಂದ ಸಂಜೆ 7 ಗಂಟೆಯವರೆಗೆ ಹಾಗೂ ರಜಾದಿನಗಳಲ್ಲಿ ಬೆಳಗ್ಗೆ 9:30ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು.
ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ, ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ (0824- 2457139) ನೋಂದಾಯಿಸಲು ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟನೆ ತಿಳಿಸಿದೆ.