ರಸ್ತೆ ಅಪಘಾತಕ್ಕೆ ಪಾದಾಚಾರಿ ಬಲಿ

Update: 2019-06-22 13:39 GMT

ಬೆಂಗಳೂರು, ಜೂ.22: ನೀರಿನ ಟ್ಯಾಂಕರ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ಬಗೋಡಿಯ ತಿರುಪಾಳ್ಯದ ಮಲ್ಲಿಕಾರ್ಜುನ್ (45) ಎಂಬುವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಡುಗೆ ಭಟ್ಟರಾಗಿದ್ದ ಮಲ್ಲಿಕಾರ್ಜುನ್ ಅವರು ಶುಕ್ರವಾರ ರಾತ್ರಿ 10ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಗೋವಿಂದ ಶೆಟ್ಟಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ನೀರಿನ ಟ್ಯಾಂಕರ್ ವಾಹನ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರ ಸಹಾಯದಿಂದ ಮಲ್ಲಿಕಾರ್ಜುನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News