ಸಂಸದ ಪ್ರಜ್ವಲ್ ಪ್ರಮಾಣ ವಚನ: ಶುಭ ಕೋರಿದ ನಿಖಿಲ್ ಕುಮಾರಸ್ವಾಮಿ

Update: 2019-06-22 15:06 GMT
ಸಂಸದ ಪ್ರಜ್ವಲ್ ರೇವಣ್ಣ- ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, ಜೂ. 22: ಲೋಕಸಭೆ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಸಹೋದರ ಪ್ರಜ್ವಲ್ ರೇವಣ್ಣ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಶನಿವಾರ ಶುಭ ಕೋರಿದ್ದಾರೆ.

ತಮ್ಮ ಫೇಸ್‌ಬುಕ್ ಖಾತೆ ಮೂಲಕ ಅವರು ಶುಭ ಹಾರೈಸಿದ್ದು, ‘ಹಾಸನ ಕ್ಷೇತ್ರದಿಂದ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿ ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದ ಆತ್ಮೀಯ ಸಹೋದರ ಪ್ರಜ್ವಲ್ ರೇವಣ್ಣನವರಿಗೆ ಶುಭ ಕೋರುತ್ತೇನೆ.

ನೆಲ, ಜಲ, ಭಾಷೆ, ರೈಲ್ವೆ ಯೋಜನೆ ಹಾಗೂ ನಮ್ಮ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಸಮರ್ಥವಾಗಿ ಧ್ವನಿ ಎತ್ತುವ ಮೂಲಕ ಪ್ರಾದೇಶಿಕ ಹಿತಾಸಕ್ತಿಯನ್ನು ರಕ್ಷಿಸುವ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಿದ್ದಾರೆ ಎನ್ನುವ ನಂಬಿಕೆ ನನ್ನದು’ ಎಂದು ನಿಖಿಲ್ ಬರೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News