×
Ad

ಉಡುಪಿ: ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆ

Update: 2019-06-22 21:48 IST

ಉಡುಪಿ, ಜೂ.22: ಉಡುಪಿ ಜಿಲ್ಲಾ ಕ್ರೀಡಾಂಗಣ ಸಮಿತಿಯ ಸಭೆಯು ಇಂದು ಅಜ್ಜರಕಾಡಿನಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಕೆ.ರಘುಪತಿ ಭಟ್‌ರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ, ಜಿಪಂ ಅಧ್ಯಕ್ಷ ದಿನಕರ್ ಬಾಬು ಹಾಗೂ ಜಿಲ್ಲಾ ಕ್ರೀಡಾಂಗಣ ಸಮಿತಿಯ ಸರ್ವ ಸದಸ್ಯರು ಭಾಗವಹಿಸಿದರು. ಸಭೆಯು ಉಡುಪಿ ಜಿಲ್ಲೆಯಲ್ಲಿ ಕ್ರೀಡೆಯ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚಿಸಿತು. ಮುಂದಿನ ಅಭಿವೃದ್ಧಿ ಕಾರ್ಯಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಯಿತು.

ಬಳಿಕ ಜಿಲ್ಲಾಧಿಕಾರಿ ಮತ್ತು ಶಾಸಕರೊಂದಿಗೆ ಸಮಿತಿಯ ಸದಸ್ಯರು ಜಿಲ್ಲಾ ಒಳಾಂಗಣ ಕ್ರೀಡಾಂಗಣ, ಈಜುಕೊಳ, ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಜಿಮ್ ಕೊಠಡಿಗಳನ್ನು ವೀಕ್ಷಿಸಿ ಇಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿತು. ಜಿಲ್ಲಾ ಸಹಾಯಕ ಕ್ರೀಡಾ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News