ಪ್ಯಾರಿಸ್ ಕಟ್ಟಡದಲ್ಲಿ ಬೆಂಕಿ: 3 ಸಾವು

Update: 2019-06-22 18:19 GMT

ಪ್ಯಾರಿಸ್, ಜೂ. 22: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನ ಮಧ್ಯ ಭಾಗದಲ್ಲಿರುವ ಕಟ್ಟಡವೊಂದರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 11ನೇ ಜಿಲ್ಲೆಯಲ್ಲಿರುವ ಅಪಾರ್ಟ್‌ಮೆಂಟ್ ಕಟ್ಡಡದಲ್ಲಿ ಬೆಂಕಿ ದುರಂತ ಸಂಭವಿಸಿದೆ. ಓರ್ವ ವ್ಯಕ್ತಿಯ ಸಾವು ಆರನೇ ಮಹಡಿಯ ಕಿಟಿಕಿಯಿಂದ ಹೊರಗೆ ಹಾರಿರುವುದರಿಂದ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ವಕ್ತಾರರೊಬ್ಬರು ತಿಳಿಸಿದ್ದಾರೆ.

ಮುಂಜಾನೆ 5 ಗಂಟೆಗೆ ಬೆಂಕಿ ಹೊತ್ತಿಕೊಂಡಿತು. ಬೆಂಕಿಯನ್ನು ನಂದಿಸಲು 200 ಅಗ್ನಿಶಾಮಕ ಸಿಬ್ಬಂದಿಗೆ ನಾಲ್ಕು ಗಂಟೆಗಳು ತಗಲಿದವು.

1970ರಲ್ಲಿ ನಿರ್ಮಾಣವಾಗಿರುವ ಕಟ್ಟಡದ ವಿನ್ಯಾಸದಿಂದಾಗಿ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ. ಬೆಂಕಿಗೆ ಕಾರಣ ಗೊತ್ತಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News