×
Ad

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸಾವಿನ ತನಿಖೆಗೆ ನೆಹರೂ ನಿರಾಕರಿಸಿದ್ದರು : ನಡ್ಡಾ ಆರೋಪ

Update: 2019-06-23 12:24 IST

ಹೊಸದಿಲ್ಲಿ, ಜೂ.23: ಭಾರತೀಯ ಜನಸಂಘದ ಸ್ಥಾಪಕರದಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸಾವಿನ ತನಿಖೆಗೆ ಇಡೀ ದೇಶ ಒತ್ತಾಯಿಸಿದ್ದರೂ, ಆಗಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ತನಿಖೆಗೆ ನಿರಾಕರಿಸಿದ್ದರು ಎಂದು ಬಿಜೆಪಿಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.

ಶ್ಯಾಮ್‌ಪ್ರಸಾದ್‌ ಮುಖರ್ಜಿ ಅವರ ಪುಣ್ಯ ತಿಥಿಯಂದು ಬಿಜೆಪಿ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರ ಸಾವಿನ ಕುರಿತಾಗಿ ತನಿಖೆಗಾಗಿ ಇಡೀ ದೇಶವೇ ಎದುರು ನೋಡುತ್ತಿತ್ತು ಆದರೆ ಪಂಡಿತ್ ನೆಹರೂ ಅವರು ತನಿಖೆಗೆ ಆದೇಶಿಸಲಿಲ್ಲ. ಇತಿಹಾಸ ಇದಕ್ಕೆ ಸಾಕ್ಷಿಯಾಗಿದೆ. ಡಾ.ಮುಖರ್ಜಿ ಅವರ ತ್ಯಾಗ ಎಂದಿಗೂ ವ್ಯರ್ಥವಾಗುವುದಿಲ್ಲ, ಬಿಜೆಪಿ ಈ ಕಾರಣಕ್ಕೆ ಬದ್ಧವಾಗಿದೆ" ಎಂದು  ಜೆ.ಪಿ. ನಡ್ಡಾ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ,  ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ಇತರ ಮುಖಂಡರು ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರು ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮಾರಕದಲ್ಲಿ ಗೌರವ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಡಾ.ಶ್ಯಾಮಾ ಪ್ರಸಾದ್ ಮುಖರ್ಜಿ ಅವರನ್ನು ಸ್ಮರಿಸಿಕೊಂಡು ಟ್ವೀಟ್ ಮಾಡಿದ್ದಾರೆ,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News