ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್

Update: 2019-06-23 12:54 GMT

ಬೆಂಗಳೂರು, ಜೂ.23: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್ ಬಂಧನಕ್ಕೆ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ ಎಂದು ಸಿಟ್(ಎಸ್‌ಐಟಿ) ತಿಳಿಸಿದೆ.

ಐಎಂಎ ಮಾಲಕ ಮುಹಮ್ಮದ್ ಮನ್ಸೂರ್ ಖಾನ್ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಸಿಐಡಿಯ ಇಂಟರ್‌ಪೋಲ್ ವಿಭಾಗದಿಂದ ಸಿಬಿಐ, ಇಂಟರ್‌ಪೋಲ್ ವಿಭಾಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು. ದಾಖಲೆಗಳನ್ನು ಪರಿಶೀಲನೆ ನಡೆಸಿ, ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ ಎಂದು ಸಿಟ್ ಅಧಿಕಾರಿಗಳು ಹೇಳಿದ್ದಾರೆ.

ಅದೇ ರೀತಿ, ಮನ್ಸೂರ್ ಪಾಸ್‌ಪೋರ್ಟ್ ಅನ್ನು ಅಮಾನತುಗೊಳಿಸುವಂತೆ ಪಾಸ್‌ಪೋರ್ಟ್ ಇಲಾಖೆಗೆ ಪತ್ರ ಬರೆಯಲಾಗಿತ್ತು. ಇದೀಗ ಪಾಸ್‌ಪೋರ್ಟ್ ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಐಎಂಎ ನಿರ್ದೇಶಕರು ಸೇರಿದಂತೆ 12 ಜನರನ್ನು ಸಿಟ್ ಅಧಿಕಾರಿಗಳು ಬಂಧಿಸಿದ್ದಾರೆ.

35 ಸಾವಿರಕ್ಕೂ ಹೆಚ್ಚು ಜನರಿಂದ ಸುಮಾರು 2 ಸಾವಿರ ಕೋಟಿ ರೂ.ವರೆಗೆ ಸಂಗ್ರಹಿಸಿರುವ ಆರೋಪಿ ಮನ್ಸೂರ್ ಖಾನ್ ಮಾಲಕತ್ವದ ಐಎಂಎ ಜ್ಯುವೆಲ್ಸ್ ಬಾಗಿಲು ಹಾಕಿದೆ. ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆ ಮತ್ತು ಬಂಧನಕ್ಕೆ ಸಿಟ್ ತನಿಖೆ ಮುಂದುವರೆಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News