ಮುಂದುವರೆದ ರೈತರ ಧರಣಿ: ಹಲವು ಸಂಘಟನೆಗಳ ಬೆಂಬಲ

Update: 2019-06-23 13:42 GMT

ಮಂಡ್ಯ, ಜೂ.23: ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಕೆಆರ್‍ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಬಿಡಲು ಸ್ಪಷ್ಟನೆ ನೀಡಿದ್ದರೆ, ಮತ್ತೊಂದೆಡೆ ರೈತಸಂಘದ ಕಾರ್ಯಕರ್ತರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ.

ಕೆಆರ್‍ಎಸ್ ಮತ್ತು ಹೇಮಾವತಿ ಅಚ್ಚುಕಟ್ಟು ಪ್ರದೇಶದ ಬೆಳೆದಿರುವ ಬೆಳೆಗಳಿಗೆ ತಕ್ಷಣ ನೀರು ಬಿಡುಗಡೆ ಮಾಡುವಂತೆ ರೈತಸಂಘದ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಮೂರು ದಿನದಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ.

ನೀರು ಬಿಡುಗಡೆ ಮಾಡುವವರೆಗೂ ಕದಲುವುದಿಲ್ಲವೆಂದು ಧರಣಿ ನಿರತರು ಪಟ್ಟುಹಿಡಿದಿದ್ದು, ಸ್ಥಳದಲ್ಲಿಯೇ ಅಡುಗೆ ತಯಾರಿಸಿಕೊಂಡು ಧರಣಿ ನಡೆಸುತ್ತಿದ್ದಾರೆ. ರೈತಸಂಘದ ಧರಣಿಗೆ ಹಲವು ಪ್ರಗತಿಪರ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ.

ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರವಿವಾರವೂ ಧರಣಿ ಮುಂದುವರಿದಿದ್ದು, ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡಾ.ರವೀಂದ್ರ, ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ, ಕಾವೇರಿ ಕಣಿವೆ ರೈತ ಒಕ್ಕೂಟದ ಸಂಚಾಲಕ ಎಂ.ಬಿ.ನಾಗಣ್ಣಗೌಡ, ನವೀನ್ ಕುಮಾರ್, ಹಲವರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News