ಕಂದಾಯ ಇಲಾಖೆ: ಜೂ.24 ರಿಂದ ಕಡತ ವಿಲೇವಾರಿ ಸಪ್ತಾಹ- ಸಚಿವ ದೇಶಪಾಂಡೆ

Update: 2019-06-23 14:53 GMT

ಬೆಂಗಳೂರು, ಜೂ.23: ಕಂದಾಯ ಇಲಾಖೆಯಲ್ಲಿ ಇತ್ಯಾರ್ಥವಾಗದೆ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಜೂ.24ರಿಂದ 30ರ ವರೆಗೆ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹವನ್ನು ಆಚರಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ದೀರ್ಘ ಕಾಲದಿಂದ ಬಾಕಿ ಉಳಿದ ಕಡತಗಳನ್ನು ವಿಲೇವಾರಿ ಮಾಡಲಾಗುವುದು ಮತ್ತು ಕಡತಗಳ ಶೀಘ್ರ ವಿಲೇವಾರಿಯಲ್ಲಿ ಕಡ್ಡಾಯವಾಗಿ ಪಾರದರ್ಶಕತೆ ಹಾಗೂ ನಿಯಮಪಾಲನೆಯನ್ನು ಕಾಯ್ದುಕೊಳ್ಳಲಾಗುವುದು. ಕಡತಗಳನ್ನು ಯಾವ ರೀತಿ ವಿಲೇವಾರಿ ಮಾಡಬೇಕೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳು ತಮ್ಮ ಆಧೀನ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಲು ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಈ ಹಿಂದೆ ನ.12, 2018ರಿಂದ ನ.18, 2018ರವರೆಗೆ ಕಡತ ವಿಲೇವಾರಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರಯುಕ್ತ ಸಪ್ತಾಹದ ಅವಧಿಯಲ್ಲಿ ರಾಜ್ಯಾದ್ಯಂತ 2.50ಲಕ್ಷಕ್ಕೂ ಅಧಿಕ ಕಡತಗಳನ್ನು ವಿಲೇವಾರಿಗೊಳಿಸಾಗಿದೆ. ಇದರಿಂದ ಪ್ರೇರಿತವಾಗಿ ಮತ್ತೊಮ್ಮೆ ಕಡತ ವಿಲೇವಾರಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News