ಮುಖರ್ಜಿ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಭಟ್

Update: 2019-06-23 17:15 GMT

ಉಡುಪಿ, ಜೂ.23: ಪ್ರಧಾನಿ ಜವಹರ್‌ಲಾಲ್ ನೆಹರೂ ಅವರ ತಪ್ಪು ನೀತಿ ಗಳಿಂದ ಬೇಸತ್ತು ಡಾ.ಶ್ಯಾಮಪ್ರಸಾದ್ ಮುಖರ್ಜಿ ರಾಷ್ಟ್ರೀಯತೆಗಾಗಿ ದೂರ ದೃಷ್ಟಿಯೊಂದಿಗೆ ಜನಸಂಘವನ್ನು ಸ್ಥಾಪಿಸಿದ್ದರು. ಇಂದಿನ ಬಿಜೆಪಿ ಜನಪ್ರತಿನಿಧಿ ಗಳು ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೆ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಆಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಜನಸಂಘ ಸ್ಥಾಪಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಬಲಿದಾನ ದಿನಾ ಚರಣೆ ಅಂಗವಾಗಿ ರವಿವಾರ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಡೆದ ಸಂಸ್ಮರಣ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ನೆಹರೂ ಓಲೈಕೆ ರಾಜಕಾರಣದಿಂದ ಭಾರತ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ರಾಷ್ಟ್ರೀಯ ವಿಚಾರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮುಖರ್ಜಿ ಏಕ ಅಭಿಪ್ರಾಯ ಹೊಂದಿದ್ದರು. ಪಕ್ಷದ ಪ್ರಾತಿ ನಿಧ್ಯಕ್ಕೋಸ್ಕರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ನಮ್ಮ ಹಿರಿಯರ ತ್ಯಾಗ ಮತ್ತು ಪರಿಶ್ರಮ ಮಾದರಿಯಾಗಬೇಕು. ದೇಶದ ಅಖಂಡತೆಗಾಗಿ ಮುಖರ್ಜಿ ಹಾಗೂ ದೀನದಯಾಳ್ ಉಪಾಧ್ಯಾಯ ಬಲಿದಾನ ಮಾಡಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿದರು. ಜಿಪಂ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯಕ್ ಸ್ವಾಗತಿಸಿ, ಕಾರ್ಯ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News