ಮೂಡಿಗೆರೆ: ನೆಟ್‍ವರ್ಕ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಪಡಿತರ ವಿತರಣೆಗೆ ತೊಂದರೆ; ಆರೋಪ

Update: 2019-06-23 17:28 GMT

ಮೂಡಿಗೆರೆ, ಜೂ.23: ತಾಲೂಕಿನ ಊರುಬಗೆ, ಗೌಡಹಳ್ಳಿ, ದೇವವೃಂದ ಗ್ರಾಮಗಳ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಹಾಗೂ ನೆಟ್‍ವರ್ಕ್ ಸಮಸ್ಯೆಯಿಂದಾಗಿ ಬಡವರಿಗೆ ಪಡಿತರ ಪಡೆಯಲು ಸಾಧ್ಯವಾಗುತ್ತಿಲ್ಲ. ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಮಸ್ಯೆಯನ್ನು ಶೀಘ್ರ ಪರಿಹಾರಕ್ಕೆ ಕ್ರಮಕೈಗೊಳ್ಳದಿದ್ದಲ್ಲಿ ಜಿಲ್ಲಾ ಕಚೇರಿ ಎದರು ಪಡಿತರ ಚೀಟಿದಾರರೊಂದಿಗೆ ಧರಣಿ ನಡೆಸುವುದಾಗಿ ಊರುಬಗೆ ಗ್ರಾ.ಪಂ. ಅಧ್ಯಕ್ಷೆ ಕೆ.ಎಂ.ಸಂತೋಷ್ ಆರೋಪಿಸಿದ್ದಾರೆ.

ಕಳೆದ ತಿಂಗಳಿನಿಂದ ಇಲಾಖೆ ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು ಅಳವಡಿಸಿ ಪಡಿತರ ವಿತರಣೆಗೆ ಆದೇಶಿಸಿದೆ. ಅದರಂತೆ ಇಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಈ ಗ್ರಾಮಗಳಲ್ಲಿ ಇಂಟರ್ ನೆಟ್ ಸಮಸ್ಯೆಯಿಂದಾಗಿ ಪಾಯಿಂಟ್ ಆಫ್ ಸೇಲ್ ಮೂಲಕ ಪಡಿತರ ಚೀಟಿದಾರರು ಸಾರ್ವಜನಿಕರು ಯಾವುದೇ ಆಹಾರ ಪದಾರ್ಥಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಅವರು, ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖಾಧಿಕಾರಿಗಳು ಪಾಯಿಂಟ್ ಆಫ್ ಸೇಲ್ ಬದಲಾಗಿ ಹಿಂದಿನಂತೆ ಬಿಲ್ಲಿಂಗ್ ವ್ಯವಸ್ಥೆ ಮೂಲಕ ಪಡಿತರ ವಿತರಣೆಗೆ ಶೀಘ್ರ ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಇಲಾಖೆಯ ಜಿಲ್ಲಾ ಕಚೇರಿ ಎದುರು ಸಾರ್ವಜನಿಕರೊಂದಿಗೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News