ಮೈತ್ರಿ ಸರ್ಕಾರ ಸುಭದ್ರ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ: ಸಿದ್ದರಾಮಯ್ಯ

Update: 2019-06-24 07:44 GMT

ಮೈಸೂರು: ಮೈತ್ರಿ ಸರ್ಕಾರ ಸುಭದ್ರವಾಗಿದ್ದು ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕೆಂಬ  ಕನಸು ಕಾಣುತಿದ್ದಾರೆ ಅದು ಯಾವುದೇ ಕಾರಣಕ್ಕೂ ಈಡೇರುವುದಿಲ್ಲ  ಮೈತ್ರಿ ಸರ್ಕಾರ ಸುಭದ್ರವಾಗಿದ್ದು ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸಲಿದ್ದಾರೆ ಎಂದರು.

ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ, ಮೈತ್ರಿ ಸರ್ಕಾರ ಬೀಳಲಿದೆ ಎಂಬ ಕನಸನ್ನು ಯಡಿಯೂರಪ್ಪ ಕಾಣುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದರು. ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಮಾಡುತ್ತೇನೆ. ಪಕ್ಷದ ಹಿತದೃಷ್ಟಿಯಿಂದ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News