ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕಿ ಎಚ್.ಗೀತಾಗೆ ಸಾರಿಗೆ ರತ್ನ ಪ್ರಶಸ್ತಿ
Update: 2019-06-24 19:33 IST
ಮಡಿಕೇರಿ, ಜೂ.24 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ಮಡಿಕೇರಿ ಘಟಕ ವ್ಯವಸ್ಥಾಪಕಿ ಗೀತಾ ಎಚ್.ಅವರಿಗೆ ಸಾರಿಗೆ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ.
ಬೆಂಗಳೂರು ಪುರಸಭೆಯಲ್ಲಿ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಎಸ್.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಪ್ರದಾನ ಮಾಡಿದರು.