ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನಿಬಂಧನೆ ಗಮಿನಿಸಿ ಅರ್ಜಿ ಸಲ್ಲಿಸಿ: ತಹಶೀಲ್ದಾರ್ ರಶ್ಮಿ ಎಸ್.ಆರ್.

Update: 2019-06-24 14:32 GMT

ಬಂಟ್ವಾಳ, ಜೂ. 24: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಈಗಾಗಲೇ ಸಾರ್ವಜನಿಕರು ಅರ್ಜಿ ನೀಡುತ್ತಿದ್ದು, ಇದರಲ್ಲಿರುವ ನಿಬಂಧನೆಗಳನ್ನು ಗಮನಿಸಿ ಅರ್ಜಿ ಸಲ್ಲಿಸಲು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೃಷಿಕರು ಪಹಣಿ ನೀಡುವ ಅವಶ್ಯಕತೆ ಇರುವುದಿಲ್ಲ. ಆದರೆ, ಸ್ವಯಂ ಘೋಷಣೆ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಗಳ ಜೆರಾಕ್ಸ್ ಜೊತೆ ಗ್ರಾಮ ಪಂಚಾಯತ್ ಅಥವಾ ಗ್ರಾಮ ಕರಣಿಕರ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ. ಭೂ ಪರಿವರ್ತನೆಯಾದ ಜಮೀನು ಹಾಗೂ 94ಸಿ, ಸಿಸಿಯಡಿಯಲ್ಲಿ. ನಿವೇಶನದಡಿಯಲ್ಲಿ ಪಡೆಯಲಾದ ಹಕ್ಕುಪತ್ರಗಳ ಜಮೀನುಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಸ್ವಯಂ ಘೋಷಣಾ ಪತ್ರದೊಂದಿಗೆ ನೋಂದಾಯಿಸಬಹುದು. ಆದರೆ ನಿವೃತ್ತ, ಹಾಲಿ ಸೇವೆಯಲ್ಲಿರುವ ಸರಕಾರಿ ಅಧಿಕಾರಿಗಳು (ಗ್ರೂಪ್ ಡಿ- ಹೊರತುಪಡಿಸಿ), 10 ಸಾವಿರ ರೂ. ಗಳಿಗಿಂತ ಹೆಚ್ಚಿನ ಮೊತ್ತ ಪಡೆಯುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು, ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿರುವವರು ಇದಕ್ಕೆ ಅನರ್ಹರು. ಹೆಚ್ಚಿನ ಮಾಹಿತಿಗೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News