ಅಕ್ರಮ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ 15 ಲಕ್ಷ ಮೌಲ್ಯದ ಚಿನ್ನ ವಶ

Update: 2019-06-24 15:38 GMT

ಮಂಗಳೂರು, ಜೂ.24: ಎರಡು ಪ್ರತ್ಯೇಕ ಪ್ರಕರಣದಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜೂ.23ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಪ್ರಯಾಣಿಕನೋರ್ವ ಗೇರ್‌ವೀಲ್ ಮೂಲಕ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 7.17 ಲಕ್ಷ ರೂ. ಮೌಲ್ಯದ 211 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಜೂ.24ರಂದು ಮಹಿಳೆಯೋರ್ವಳು ಮೂರು ಚಿನ್ನದ ಸರ ಹಾಗೂ ನಾಲ್ಕು ಚಿನ್ನದ ಬಳೆಗಳನ್ನು ಸಾಗಾಟ ನಡೆಸುತ್ತಿದ್ದಳು. ಸುಮಾರು 8.16 ಲಕ್ಷ ರೂ. ಮೌಲ್ಯದ 239.86 ಗ್ರಾಂ ಚಿನ್ನ ಸಾಗಾಟ ಮಾಡುತ್ತಿದ್ದಳು.
ಎರಡು ಪ್ರಕರಣದಲ್ಲಿ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News