ಸೈನ್ಸ್ ಸಿಟಿ ಯೋಜನೆಗೆ ಸುತ್ತೂರಿನಲ್ಲಿ ಸ್ಥಳ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ

Update: 2019-06-24 17:16 GMT

ಮೈಸೂರು,ಜೂ.24: ಭಾರತ ಸರ್ಕಾರದ ಸೈನ್ಸ್ ಸಿಟಿ ಯೋಜನೆಗೆ ಸುತ್ತೂರಿನಲ್ಲಿ ಸೋಮವಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಥಳ ಪರಿಶೀಲನೆ ನಡೆಸಿದರು.

ಕೇಂದ್ರ ಸರ್ಕಾರ ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ರಾಜ್ಯಕ್ಕೆ ಒಂದೊಂದು ಸೈನ್ಸ್ ಸಿಟಿ ಹಾಗು 4 ರಿಂದ 5 ರೀಜನಲ್ ಸೆಂಟರ್ ಮಾಡಲು ಯೋಜನೆಯ ಪ್ರಸ್ತಾವನೆ ಇದ್ದು, ಈ ಯೋಜನೆಗೆ ಅಗತ್ಯವಿರುವ 25 ಎಕರೆ ಭೂಮಿಯನ್ನು ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ನೀಡಲು ಸುತ್ತೂರು ಮಠ ಮುಂದೆ ಬಂದಿದೆ. ಈ ಹಿನ್ನೆಲೆಯಲ್ಲಿ ಸುತ್ತೂರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಥಳ ಪರಿಶೀಲನೆ ಮಾಡಿದರು. ನಂತರ ಸುತ್ತೂರು ಶ್ರೀಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು.

ಸೈನ್ಸ್ ಸಿಟಿಯ ಉದ್ದೇಶ: ಮಕ್ಕಳಿಗೆ ವಿಜ್ಞಾನದ ಬಗ್ಗೆ ಅಭಿರುಚಿ ಮೂಡಿಸುವುದು ಹಾಗೂ ಪ್ರತಿಯೊಬ್ಬರು ಜೀವನದಲ್ಲಿ ಈ ತಂತ್ರಜ್ಞಾನವನ್ನು ಹೇಗೆ ಆವರಿಸಿಕೊಂಡಿದೆ ಎಂಬುದನ್ನು ತಿಳಿಸುವ ಗ್ಯಾಲರಿಗಳು. ಜೊತೆಗೆ ಸೈನ್ಸ್ ಗೆ ಸಂಬಂಧಿಸಿದ ಶಿಬಿರಗಳನ್ನು ಆಯೋಜನೆ ಮಾಡುವ ಉದ್ದೇಶ ಹೊಂದಲಾಗಿದೆ. ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಸೆಮಿನಾರ್ ಗಳು ನೂತನ ಅವಿಷ್ಕಾರಗಳ ಪ್ರದರ್ಶನವನ್ನು ಏರ್ಪಡಿಸಲು ಈ ಕೇಂದ್ರವನ್ನು ಬಳಸಿಕೊಳ್ಳಲಾಗುವುದು. ವಿಜ್ಞಾನದ ಹೊಸ ಹೊಸ ಅವಿಷ್ಕಾರಗಳ ಬಗ್ಗೆ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ತಿಳಿಸಕೊಡಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News