×
Ad

ಸಿಎಂ ಮಂಡ್ಯ ಜನರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ: ರೈತ ಸಂಘದ ರಾಜ್ಯಾಧ್ಯಕ್ಷ ನಾಗೇಂದ್ರ ಆರೋಪ

Update: 2019-06-24 23:29 IST

ಮಂಡ್ಯ, ಜೂ.24: ಲೋಕಸಭೆ ಚುನಾವಣೆಯಲ್ಲಿ ಪುತ್ರನ ಸೋಲಿನ ಕಾರಣಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ಜನರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪಿಸಿದ್ದಾರೆ.

ನೀರು ಬಿಡುಗಡೆಗೆ ರೈತಸಂಘದ ವತಿಯಿಂದ ನಡೆಯುತ್ತಿರುವ ಧರಣಿ ವೇಳೆ ಮಾತನಾಡಿದ ಅವರು, ರೈತರ ಹೊಟ್ಟೆ ಉರಿಸಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ. ದ್ವೇಷವನ್ನು ಬಿಟ್ಟು ಒಣಗುತ್ತಿರುವ ಬೆಳೆಗಳಿಗೆ ಜಲಾಶಯದಿಂದ ನಿರು ಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಿಂದ ಎಂಟು ಜನ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದಾರೆ. ಇಬ್ಬರು ಮಂತ್ರಿಗಳು ಇದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಜತೆ ಪ್ರತಿಭಟನೆ ಮಾಡುತ್ತಿದ್ದರು. ಇದನ್ನೆಲ್ಲಾ ಗಮನಿಸಿದರೆ ಶಾಸಕರು ಮತ್ತು ಸಚಿವರು ಸಹ ದ್ವೇಷ ಸಾಧಿಸುತ್ತಿದ್ದಾರೆ ಎಂದು ಅವರು ದೂರಿದರು.

ಉಪಮುಖ್ಯಮಂತ್ರಿ ಪರಮೇಶ್ವರ್ ಮಾರ್ಗಮಧ್ಯೆ ಇಲ್ಲಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿ ಸರಕಾರಕ್ಕೆ ಪರಿಸ್ಥಿತಿ ವಿವರಿಸುವುದಾಗಿ ತಿಳಿಸಿದ್ದಾರೆ. ಜತೆಗೆ ಹೊರ ಜಿಲ್ಲೆ ಕಾರ್ಖಾನೆಗಳಿಗೆ ಕಬ್ಬು ಸಾಗಾಣೆ ಮಾಡಲು ಹಾಗೂ ಭತ್ತ ಖರೀದಿ ಕೇಂದ್ರ ತೆರೆಯಲು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News