ಆಸ್ಟ್ರೇಲಿಯ ವಿರುದ್ಧ ಪಂದ್ಯಕ್ಕೂ ಜೇಸನ್ ರಾಯ್ ಅಲಭ್ಯ

Update: 2019-06-24 18:43 GMT

ಲಂಡನ್, ಜೂ.24: ಆರಂಭಿಕ ಆಟಗಾರ ಜೇಸನ್ ರಾಯ್ ಸರಿಯಾದ ಸಮಯಕ್ಕೆ ಚೇತರಿಸಿಕೊಳ್ಳಲು ವಿಫಲವಾಗಿದ್ದು, ಆಸ್ಟ್ರೇಲಿಯ ವಿರುದ್ಧ ಮಂಗಳವಾರ ನಡೆಯುವ ವಿಶ್ವಕಪ್ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಈ ಬೆಳವಣಿಗೆಯು ಇಂಗ್ಲೆಂಡ್‌ಗೆ ತೀವ್ರ ಹಿನ್ನಡೆಯಾಗಿದೆ.

ಜೇಸನ್ ರಾಯ್‌ಗೆ ಜೂ.14 ರಂದು ವೆಸ್ಟ್‌ಇಂಡೀಸ್ ವಿರುದ್ಧ ಪಂದ್ಯದ ವೇಳೆ ಸ್ನಾಯು ಸೆಳೆತ ಕಾಣಿಸಿಕೊಂಡಿದ್ದು, ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧ ಪಂದ್ಯದಲ್ಲೂ ಅವರು ಭಾಗವಹಿಸಿರಲಿಲ್ಲ. ಜೂ.30 ರಂದು ಭಾರತ ವಿರುದ್ಧ ನಡೆಯಲಿರುವ ವಿಶ್ವಕಪ್ ಪಂದ್ಯಕ್ಕಿಂತ ಮೊದಲು ರಾಯ್ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ರಾಯ್ ಅನುಪಸ್ಥಿತಿಯಲ್ಲಿ ಜೇಮ್ಸ್ ವಿನ್ಸಿ ಆರಂಭಿಕನಾಗಿ ಮುಂದುವರಿಯಲಿದ್ದಾರೆ.

ರಾಯ್ ಗಾಯಗೊಂಡ ಬಳಿಕ ಮೊದಲ ಬಾರಿ ಸೋಮವಾರ ನೆಟ್‌ಪ್ರಾಕ್ಟೀಸ್ ನಡೆಸಿದರು. ಅಂತಿಮ ಎರಡು ಗ್ರೂಪ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡಕ್ಕೆ ವಾಪಸ್ ಕರೆ ತರುವ ಉದ್ದೇಶದಿಂದ ಪ್ರತಿದಿನ ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. ದಕ್ಷಿಣ ಆಫ್ರಿಕ ವಿರುದ್ಧ ನಡೆದ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯ್ ಅರ್ಧಶತಕ ಸಿಡಿಸಿದ್ದರು. ಬಾಂಗ್ಲಾದೇಶ ವಿರುದ್ಧ ಶತಕ ಸಿಡಿಸಿ ಗೆಲುವಿಗೆ ನೆರವಾಗಿದ್ದರು. ಜಾನಿ ಬೈರ್‌ಸ್ಟೋವ್‌ರೊಂದಿಗೆ ಇನಿಂಗ್ಸ್ ಆರಂಭಿಸುತ್ತಿದ್ದ ರಾಯ್ ಏಕದಿನ ಕ್ರಿಕೆಟ್ ರ್ಯಾಂಕಿಂಗ್‌ನಲ್ಲಿ ಇಂಗ್ಲೆಂಡ್ ತಂಡ ಏರಿಕೆ ಕಾಣಲು ಹಾಗೂ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿ ಗುರುತಿಸಿಕೊಳ್ಳಲು ಕಾರಣರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News