ಕೋಟೆಕಾರ್: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ

Update: 2019-06-25 12:53 GMT

ಮಂಗಳೂರು, ಜೂ.25: ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ 8ನೇ ವಾರ್ಡ್‌ನ ಅಜ್ಜಿನಡ್ಕ ಸಲಫಿ ಮಸ್ಜಿದ್ ಎದುರುಗಡೆ ರಸ್ತೆಯಲ್ಲೇ ಇರುವ ಹೊಂಡವು ಅಪಾಯವನ್ನು ಆಹ್ವಾನಿಸುತ್ತಿದೆ ಎಂದು ಸ್ಥಳೀಯ ನಾಗರಿಕರು ಆರೋಪಿಸಿದ್ದಾರೆ.

ಇಲ್ಲಿ ನಡೆದಿರುವ ಅವೈಜ್ಞಾನಿಕ ಕಾಂಕ್ರಿಟೀಕರಣ ಮತ್ತು ಚರಂಡಿ ವ್ಯವಸ್ಥೆ ಇಲ್ಲದಿರುವುದು ಇದಕ್ಕೆಲ್ಲಾ ಕಾರಣವಾಗಿದೆ. ಅಲ್ಲದೆ ಎರಡೆರಡು ವಿದ್ಯುತ್ ಟ್ರಾನ್ಸ್ಫಾರ್ಮರ್‌ಗಳು ಇಲ್ಲಿದ್ದು ಪಾದಚಾರಿಗಳಿಗೆ ನಡೆಯಲು ಜಾಗವಿಲ್ಲದೆ ಅದರ ಅಡಿಯಲ್ಲೇ ನಡೆಯಬೇಕಾದ ಪರಿಸ್ಥಿತಿ ಇದೆ. ಉಚ್ಚಿಲದ ಹೆದ್ದಾರಿ ತಲುಪಲು ಸಾರ್ವಜನಿಕರು ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ. ಧಾರ್ಮಿಕ ಕೇಂದ್ರಗೆ ತೆರಳುವವರು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಪಾಡಂತೂ ಹೇಳತೀರದು. ದ್ವಿಚಕ್ರ ವಾಹನ ಸವಾರರಂತೂ ಸರ್ಕಸ್ ಮಾಡಿ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಅಪಾಯವನ್ನು ಆಹ್ವಾನಿಸುತ್ತಿರುವ ಈ ಹೊಂಡವನ್ನು ಇನ್ನಾದರೂ ಮುಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News