ಟೈಗರ್ ಬಾಮ್ ಕ್ಯಾಪ್‌ನಲ್ಲಿ ಅಕ್ರಮ ಚಿನ್ನ ಸಾಗಾಟ: 12 ಲಕ್ಷ ಮೌಲ್ಯದ ಸೊತ್ತು ವಶ

Update: 2019-06-25 15:30 GMT

ಮಂಗಳೂರು, ಜೂ.25: ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದುದನ್ನು ಪತ್ತೆ ಹಚ್ಚಿದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

12.06 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್‌ನ 349.48 ಗ್ರಾಂ ಚಿನ್ನವನ್ನು ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ. ಟೈಗರ್ ಬಾಮ್, ಟಾಲ್ಕಮ್ ಪೌಡರ್ ತಳಭಾಗದಲ್ಲಿ ಚಿನ್ನವನ್ನು ದ್ರವ ರೂಪದಲ್ಲಿ ಲೇಪಿಸಿ ಸಾಗಾಟಕ್ಕೆ ಯತ್ನಿಸಿದ್ದ. ಸೊತ್ತು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಜರುಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News