ಉದ್ಯಮಶೀಲತಾ ಕೌಶಲ್ಯ ತರಬೇತಿ, ಉದ್ಯೋಗ ಮೇಳ ಉದ್ಘಾಟನೆ

Update: 2019-06-25 15:47 GMT

ಕೋಟೇಶ್ವರ, ಜೂ.25: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಪದವೀಧರ ರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ ಉದ್ಯೋಗಮೇಳವನ್ನು ಹಮ್ಮಿ ಕೊಂಡಾಗ ಅದು ಪಲಪ್ರದವಾಗುತ್ತದೆ ಎಂದು ಜೆ.ಪಿ.ಶೆಟ್ಟಿ ಕಟ್ಕೆರೆ ಹೇಳಿದ್ದಾರೆ.

ಮಂಗಳವಾರ ಉಡುಪಿ ಉದ್ಯೋಗ ವಿನಿಮಯ ಕಚೇರಿ ಮತ್ತು ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ಕೋಟೇಶ್ವರ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉದ್ಯಮಶೀಲಾತಾ ಕೌಶಲ್ಯ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಅನುವದ ಅವಶ್ಯಕತೆ ಇದೆ ಎಂದವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ್, ಉದ್ಯೋಗಾಂಕಾಕ್ಷಿಗಳು ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ಉದ್ಯೋಗ ಮಾರ್ಗದರ್ಶನ ಮತ್ತು ಸ್ಥಾನೀಕರಣ ಘಟಕದ ಸಂಚಾಲಕ ಡಾ.ಸುಬ್ರಹ್ಮಣ್ಯ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಉದ್ಯೋಗ ವಿನಿಮಯ ಕಚೇರಿಯ ಸಮಾಲೋಚಕ ಮತ್ತು ತರಬೇತುದಾರ ಜಗತ್ ಕೆ, ಸಂಪನ್ಮೂಲ ವ್ಯಕ್ತಿ ಮಂಜುನಾಥ ನಾಯಕ್, ವಿದ್ಯಾರ್ಥಿ ಕ್ಷೇಮಾಪಾಲನ ಅಧಿಕಾರಿ ಡಾ. ಉಷಾದೇವಿ ಜೆ.ಎಸ್, ಆಂತರಿಕ ಗುಣಮಟ್ಟ ಖಾತರಿಕೋಶ ಸಂಚಾಲಕ ಗಣೇಶ್ ಪೈ ಎಂ., ಉದ್ಯೋಗ ಮಾರ್ಗದರ್ಶನ ಸ್ನಾತಕೋತ್ತರ ವಿಬಾಗದ ಸಂಚಾಲಕ ಸಂತೋಷ್ ನಾಯಕ್, ಸಂಚಾಲಕ ವೆಂಕಟರಾಮ ಭಟ್ ಉಪಸ್ಥಿತರಿದ್ದರು.

ಕಾವ್ಯ ಸ್ವಾಗತಿಸಿ, ಲತಾ ವಂದಿಸಿದರು. ಅಂತಿಮ ಪದವಿ ವಿದ್ಯಾರ್ಥಿನಿ ದೀಪಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News