ಮುಖ್ಯಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ: ಅರ್ಜಿ ಆಹ್ವಾನ

Update: 2019-06-26 14:38 GMT

ಮಂಗಳೂರು: ಗ್ರಾಮೀಣ ಪ್ರದೇಶದ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಮಾಡಲು 2019-20 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಂಕ್‌ನ ಆರ್ಥಿಕ ಸಾಲದ ಮೂಲಕ ಅವಕಾಶ ಕಲ್ಪಿಸಲಾಗುವುದು. ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಮಾತ್ರ ಪ್ರತಿ ಘಟಕಕ್ಕೆ ಗರಿಷ್ಠ 10 ಲಕ್ಷ ರೂ. ಯೋಜನಾ ವೆಚ್ಚದ ಕಿರು ಉತ್ಪಾದನಾ ಘಟಕಗಳನ್ನು ಹಾಗೂ ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ವಿವಿಧ ಹಣಕಾಸು ಸಂಸ್ಥೆಗಳ ಮೂಲಕ ಸಾಲ ನೀಡಲಾಗುವುದು.

ಯೋಜನಾ ವೆಚ್ಚ ಐದು ಲಕ್ಷ ರೂ. ಮತ್ತು ಅದಕ್ಕಿಂತ ಮೇಲ್ಪಟ್ಟ ಯೋಜನೆಗಳನ್ನು ಸ್ಥಾಪಿಸಲು ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆ 8ನೇ ತರಗತಿ ಉತ್ತೀರ್ಣರಾಗಿರಬೇಕು. ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯದಿಂದ ಸಾಮಾನ್ಯ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ.25ರಷ್ಟು (ಗರಿಷ್ಠ 2.50 ಲಕ್ಷ ವರೆಗೆ ) ಹಾಗೂ ವಿಶೇಷ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ.35ರಷ್ಟು (ಗರಿಷ್ಠ 3.50 ಲಕ್ಷ ವರೆಗೆ ) ಸಹಾಯಧನ ನೀಡಲಾಗುವುದು.

ಯೋಜನೆಯನ್ನು ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಡಿ ಮಂಗಳೂರು ಹಾಗೂ ಜಿಲ್ಲಾ ಅಧಿಕಾರಿಗಳು ಖಾದಿ ಗ್ರಾಮೋದ್ಯೋಗ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹತೆಯುಳ್ಳ ಆಸಕ್ತ ಯುವಜನರು ವೆಬ್‌ಸೈಟ್‌ನಲ್ಲಿ www.cmegp.kar.nic.in ಆನ್‌ಲೈನ್ ಮೂಲಕ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಯೆಯ್ಯಿಡಿ ಮಂಗಳೂರು ಇವರ ಕಚೇರಿ ದೂ.ಸಂ.: 0824-2214021ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News