ಕೆಓಎಸ್ ಪೂರಕ ಪರೀಕ್ಷೆ; ಉಡುಪಿಯಲ್ಲಿ ನಿಷೇಧಾಜ್ಞೆ

Update: 2019-06-26 16:12 GMT

ಉಡುಪಿ, ಜೂ.26: ಜಿಲ್ಲೆಯಲ್ಲಿ ಕೆಓಎಸ್ ಪೂರಕ ಪರೀಕ್ಷೆಗಳು ಜೂ.29 ರವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ನಡೆಯಲಿದ್ದು, ಪೂರಕ ಪರೀಕ್ಷೆಗಳು ಮುಕ್ತಾಯಗೊಳ್ಳುವವರೆಗೆ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿ ಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಆದೇಶ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತ ಜೂನ್ 29ರವರೆಗೆ ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News