ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ: ಸಚಿವ ಸಂಪುಟ ಉಪ ಸಮಿತಿ ರಚನೆ

Update: 2019-06-26 16:51 GMT
ಎಂ.ಬಿ.ಪಾಟೀಲ್

ಬೆಂಗಳೂರು, ಜೂ.25: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 3,667.31 ಎಕರೆ ಭೂಮಿಯನ್ನು ಜೆಎಸ್‌ಡಬ್ಲುಸ್ಟೀಲ್ ಲಿಮಿಟೆಡ್ ಸಂಸ್ಥೆಯ ಪರವಾಗಿ ಶುದ್ಧ ಕ್ರಯ ಪತ್ರಗಳನ್ನು ಜಾರಿಗೊಳಿಸುವ ಪ್ರಸ್ತಾವನೆ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಗೃಹ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೃಷ್ಣಭೈರೇಗೌಡ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆಯನ್ನು ಸಚಿವ ಸಂಪುಟ ಉಪ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News