ಗೆಳತಿಯ ಹುಟ್ಟುಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ಇಬ್ಬರು ದಲಿತ ಯುವಕರಿಗೆ ಥಳಿತ

Update: 2019-06-26 17:33 GMT

    ಬುಂಡಿ,ಜೂ.26: ಗೆಳತಿಯೊಬ್ಬಳ ಹುಟ್ಟುಹಬ್ಬದ ಸಮಾರಂಭಕ್ಕೆ ಪಾಲ್ಗೊಂಡಿದ್ದಕ್ಕಾಗಿ ಇಬ್ಬರು ದಲಿತ ಯುವಕರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಬುಂಡಿ ಎಂಬಲ್ಲಿ ನಡೆದಿದೆ

  ಈ ಘಟನೆ ನಡೆದಿದ್ದು, ಸ್ಥಳೀಯ ಗ್ರಾಮಸ್ಥರು ಈ ಇಬ್ಬರು ಯುವಕರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ, ಹಿಗ್ಗಾಮಗ್ಗಾ ಥಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವೀಡಿಯೊ ವೈರಲ್ ಆದ ಬಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

   ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿದ ಹಾಗೂ ಅವರನ್ನು ಅಪಮಾನಿಸಿದ ಆರೋಪದಲ್ಲಿ ಶಿಶುಪಾಲ್, ಸೂರಜ್‌ಮಾಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬುಂಡಿ ಜಿಲ್ಲೆಯ ಎಎಸ್‌ಪಿ ಸತ್ನಾಮ್ ಸಿಂಗ್ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News