ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ: ಇಬ್ಬರ ಬಂಧನ

Update: 2019-06-26 17:40 GMT

ಮೈಸೂರು,ಜೂ.26: ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಯುವತಿಯೋರ್ವಳನ್ನು ರಕ್ಷಿಸಿರುವ ಘಟನೆ ಗಳಗನಹುಂಡಿಯಲ್ಲಿ ನಡೆದಿದೆ.

ಬಂಧಿತರನ್ನು ಮಂಗಳ(36), ಮಧು (40) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಗಳಗನಹುಂಡಿ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News