ಖಶೋಗಿ ಹತ್ಯೆಗೆ ಉತ್ತರದಾಯಿತ್ವ ನಿಗದಿಯಾಗಬೇಕು: ತೆರೇಸಾ

Update: 2019-06-26 18:13 GMT

ಲಂಡನ್, ಜೂ. 26: ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿಯ ಹತ್ಯೆಗೆ ಉತ್ತರದಾಯಿತ್ವ ನಿಗದಿಯಾಗುವುದನ್ನು ನೋಡಲು ಬ್ರಿಟನ್ ಬಯಸುತ್ತದೆ ಎಂದು ಬ್ರಿಟನ್ ಪ್ರಧಾನಿ ತೆರೇಸಾ ಮೇ ಬುಧವಾರ ಹೇಳಿದ್ದಾರೆ.

ಈ ಸಾವಿನ ಬಗ್ಗೆ ಸೌದಿ ಅರೇಬಿಯ ಕೂಲಂಕಷವಾಗಿ ತನಿಖೆ ನಡೆಸಬೇಕು ಹಾಗೂ ತನಿಖೆಯು ಅಂತರ್‌ರಾಷ್ಟ್ರೀಯ ಕಾನೂನುಗಳಿಗೆ ಅನುಗುಣವಾಗಿರಬೇಕು ಎಂದು ಅವರು ಹೇಳಿದ್ದಾರೆ.

ಪತ್ರಕರ್ತನ ಹತ್ಯೆಗೆ ಸಂಬಂಧಿಸಿ ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಬಲವಾದ ಪುರಾವೆಗಳಿದ್ದು, ಅವರ ವಿರುದ್ಧ ತನಿಖೆ ನಡೆಯಬೇಕು ಎಂಬುದಾಗಿ ಕಳೆದ ವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಮಾನವಹಕ್ಕುಗಳ ತನಿಖೆಗಾರರ ವರದಿ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News