ಪಿಲಾತಬೆಟ್ಟು: ತಂದೆಯಿಂದಲೇ ಮಗಳ ಅತ್ಯಾಚಾರ; ಆರೋಪಿ ವಶಕ್ಕೆ

Update: 2019-06-27 07:43 GMT

ಬಂಟ್ವಾಳ, ಜೂ.27: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತ ಬಾಲಕಿಯು ತಂದೆ-ತಾಯಿ, ತಮ್ಮ ಹಾಗೂ ತಂಗಿಯೊಂದಿಗೆ ಪಿಲಾತಬೆಟ್ಟು ಮನೆಯಲ್ಲಿ ವಾಸವಾಗಿದ್ದು, ಫೆ.8ರಂದು ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವ ಸಂದರ್ಭ ತನ್ನ ತಂದೆ ಬಲಾತ್ಕಾರವಾಗಿ ಅತ್ಯಾಚಾರ ಎಸಗಿದ್ದಾನೆ. ಅದಲ್ಲದೆ ಬಳಿಕವೂ ಹಲವು ಅತ್ಯಾಚಾರ ಎಸಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.

 ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.  ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News