ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಲೀಲಾದೇವಿ ಆರ್.ಪ್ರಸಾದ್ ನೇಮಕ

Update: 2019-06-27 13:11 GMT
ಚಿತ್ರ ಕೃಪೆ : deccanchronicle

ಬೆಂಗಳೂರು, ಜೂ. 27: ಜಾತ್ಯತೀತ ಜನತಾ ದಳ(ಜೆಡಿಎಸ್) ಮಹಿಳಾ ಘಟಕದ ಅಧ್ಯಕ್ಷರಾಗಿ ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಗುರುವಾರ ಇಲ್ಲಿನ ಜೆಪಿ ಭವನದಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೀಲಾದೇವಿ ಆರ್.ಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ವೇಳೆ ಬೆಂಗಳೂರು ನಗರ ಘಟಕದ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಸಾಮಾಜಿಕ ಹೋರಾಟಗಾರ್ತಿ ರೂತ್ ಮನೋರಮಾ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News