ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿ ಸಲೀಂ ಕೊಲೆ
Update: 2019-06-27 20:58 IST
ಬೆಂಗಳೂರು, ಜೂ.27:ಹಳೇ ದ್ವೇಷದ ಹಿನ್ನೆಲೆ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಜಿ ಹಳ್ಳಿ ನಿವಾಸಿ ಸಲೀಂ ಯಾನೆ ಶಾಹಿದ್ ಮೃತ ರೌಡಿ ಶೀಟರ್ ಎಂದು ಪೊಲೀಸರು ಗುರುತಿಸಿದ್ದಾರೆ. ಗುರುವಾರ ಸಂಜೆ ಇಲ್ಲಿನ ದೇವರಜೀವನಹಳ್ಳಿ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳ ಗುಂಪೊಂದು, ಏಕಾಏಕಿ ಸಲೀಂ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ಬಳಿಕ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದರೂ, ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನೆ ಸಂಬಂಧ ಡಿಜೆ ಹಳ್ಳಿ ಠಾಣಾ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಲೀಂ ಮೇಲೆ ವಿವಿಧ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿಯೇ ಕೊಲೆಗೈದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.