ಜು.14: ಕಾಸರರಗೊಡಿನಲ್ಲಿ ಕನ್ನಡ ಪರ ಹೋರಾಟಗಾರರ ಜಾಗೃತಿ ಸಮಾವೇಶ
ಮಂಗಳೂರು : ಕರ್ನಾಟಕ ನವ ನಿರ್ಮಾಣ ಸೇನೆ ಬೆಂಗಳೂರು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ 2019 ಜು.14ರಂದು ರಾಜ್ಯದ ಗಡಿನಾಡು ಕಾಸರಗೋಡು ಕನ್ನಡ ಗ್ರಾಮದಲ್ಲಿ ಒಂದು ದಿನದ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾ ಶಂಕರ ಪಾಟೀಲ ಹಾಗೂ ಕ್ಜಜರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ನೆಲೆಸಿರುವ ಕನ್ನಡಿಗರು ವಿವಿಧ ಕನ್ನಡ ಉಪಭಾಷೆಯ ಸಮುದಾಯದವರು ಮತ್ತು ಕನ್ನಡ ಭಾಷೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸಂವಿಧಾನಾತ್ಮಕ ಸವಲತ್ತುಗಳನ್ನು ಯಥಾ ಸ್ಥಿತಿಯಲ್ಲಿ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು. ಈ ಹಿನ್ನೆಲೆಯಲ್ಲಿ ಕನ್ನಡಿಗರೆಲ್ಲರ ಸಹಕಾರದಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ , ಇತಿಹಾಸವನ್ನು ಉಳಿಸಿ ಬೆಳೆಸುವತ್ತಾ ಕನ್ನಡ ಭಾಷಾ ಅಲ್ಪ ಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಕಾಸರಗೋಡು ಜಿಲ್ಲೆಯ ಸಮಸ್ತ ಕನ್ನಡಿಗರ ಹಿತರಕ್ಷಣೆಯೊಂದಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗಾಗಿ ಕಾಸರಗೋಡು ಜಿಲ್ಲಾ ಜಾಗೃತಿ ಸಮಾವೇಶವನ್ನು ಏರ್ಪಡಿಸಲಾಗಿದೆ.
ಈ ಸಮಾವೇಶದಲ್ಲಿ ಕರ್ನಾಟಕ ರಾಜ್ಯದಿಂದ ಕನ್ನಡ ಹೋರಾಟಗಾರರು, ಕನ್ನಡ ಚಳವಳಿಗಾರರು,ಕರ್ನಾಟಕ ನವ ನಿರ್ಮಾಣ ಸೇನೆ ಬೆಂಗಳೂರು ಇದರ ರಾಜ್ಯ,ಜಿಲ್ಲಾ ಘಟಕದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಇದಲ್ಲದೆ ಸಮಾವೇಸದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎರಡು ರಾಜ್ಯಗಳ ಸಚಿವರು ,ಶಾಸಕರು,ಸಂಸದರನ್ನು ಆಹ್ವಾನಿಸಲಾಗುವುದು ಈ ಹಿನ್ನೆಲೆಯಲ್ಲಿ ಜೂ,30ರಂದು ಕಾಸರಗೋಡಿನಲ್ಲಿ ತಯಾರಿ ಸಭೆ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.