×
Ad

ಕೋಟ:ಬೈಕ್ ಅಪಘಾತ, ಸವಾರ ಗಂಭೀರ

Update: 2019-06-27 23:09 IST

ಕೋಟ, ಜೂ.27: ಇಂದು ಸಂಜೆ 5:20ರ ಸುಮಾರಿಗೆ ಬೈಕೊಂದು ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೈಕ್ ಸವಾರರನ್ನು ವಿನಯ್ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಚಲಾಯಿಸುತಿದ್ದ ಬೈಕ್ ಅಮೃತೇಶ್ವರ ದೇವಸ್ಥಾನದ ಎದುರು ಹೆದ್ದಾರಿಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಘಟನೆ ಸಂಭವಿಸಿತ್ತು. ವೇಗವಾಗಿ ಚಲಿಸುತಿದ್ದ ಬೈಕ್ ಸವಾರನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದಿತ್ತು. ಇದರಿಂದ ವಿನಯ ಆಚಾರ್ಯರ ತಲೆಗೆ ತೀವ್ರವಾಗಿ ಏಟು ಬಿದ್ದಿದೆ. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದ್ದರೂ ಅಪಾಯದಿಂದ ಪಾರಾಗಿದ್ದಾರೆಂದು ಹೇಳಲಾಗಿದೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News