ವಿವಾಹವಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಬಂಧನ

Update: 2019-06-27 17:51 GMT

ಈಶ್ವರಮಂಗಲ: ವಿವಾಹವಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪ ಹೊರಿಸಿ ಯುವತಿಯೊಬ್ಬಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ನಿವಾಸಿ ರಾಮಣ್ಣ ಪೂಜಾರಿ ಎಂಬವರ ಪುತ್ರ ನಿತೇಶ್ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ, 2017ನೇ ಸೆ. 13ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ದೈಹಿಕ ಸಂಪರ್ಕ ಮಾಡಿದ್ದು, ಇದೀಗ ಆತ ವಿವಾಹ ಪ್ರಸ್ತಾಪದ ವೇಳೆ ವಿವಾಹವಾಗಲು ನಿರಾಕರಿಸುವ ಮೂಲಕ ವಂಚಿಸಿದ್ದಾನೆ. ಈ ವಿಚಾರವನ್ನು ನಿತೇಶ್‍ನ ಮನೆಮಂದಿಗೆ ತಿಳಿಸಿದ ವೇಳೆ ಆತನ ತಂದೆ ರಾಮಣ್ಣ ಪೂಜಾರಿ ಮತ್ತು ಆತನ ಬಾವ ನಿಕಿತೇಜ್ ಅವರು ಬೆದರಿಕೆಯೊಡ್ಡಿದ್ದಾರೆ ಎಂದು ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

ಯುವತಿ ನೀಡಿದ ದೂರಿನಂತೆ ಆರೋಪಿ ನಿತೀಶ್ ಮೇಲೆ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಮಾನಭಂಗ ಮತ್ತು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆತನ ತಂದೆ ರಾಮಣ್ಣ ಪೂಜಾರಿ ಮತ್ತು ಬಾವ ನಿಕಿತೇಜ್ ವಿರುದ್ದ ಬೆದರಿಕೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ನಿತೀಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News