ಮಹಿಳೆಗೆ ಲೈಂಗಿಕ ಕಿರುಕುಳ; ಸಂಘಟನೆ ಅಧ್ಯಕ್ಷ ಬಂಧನ
Update: 2019-06-27 23:35 IST
ಬೆಂಗಳೂರು, ಜೂ.27: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಸಂಬಂಧ ಕನ್ನಡ ಸಂಘಟನೆಯೊಂದರ ರಾಜ್ಯ ಘಟಕ ಅಧ್ಯಕ್ಷನನ್ನು ಇಲ್ಲಿನ ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕನ್ನಡಸಿರಿ ಸಂಘಟನೆಯ ರಾಜ್ಯಾಧ್ಯಕ್ಷ ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಮಹಿಳೆಯ ಪುತ್ರಿಗೆ ಆರ್‌ಟಿಇ ಅಡಿಯಲ್ಲಿ ಶಾಲೆಗೆ ಪ್ರವೇಶ ಗಿಟ್ಟಿಸಿಕೊಟ್ಟಿದ್ದ ಆರೋಪಿ ಆನಂದ್, ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ಜೂ.16ರಂದು ಹಾರೋಹಳ್ಳಿಯಲ್ಲಿರುವ ತನ್ನ ಮನೆಗೆ ಮಹಿಳೆಯನ್ನು ಕರೆದು, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.