×
Ad

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Update: 2019-06-27 23:39 IST

ಬೆಂಗಳೂರು, ಜೂ. 27: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಿಕೋದ್ಯಮ ಪದವೀಧರರಾದ ಮಹಿಳಾ ಅಭ್ಯರ್ಥಿಗಳ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಕಚೇರಿಯ ಕ್ಷೇತ್ರ ಹಾಗೂ ಮಾಧ್ಯಮ ಪ್ರಚಾರ ಕಾರ್ಯನಿರ್ವಹಿಸಲು ಇಬ್ಬರು ಮಹಿಳಾ ಅಪ್ರೆಂಟಿಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ತರಬೇತಿ ಅವಧಿ 9 ತಿಂಗಳದ್ದಾಗಿದ್ದು, ತರಬೇತಿ ಅವಧಿಯಲ್ಲಿ ಪ್ರತಿ ಅಭ್ಯರ್ಥಿಗೆ ಮಾಸಿಕ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುತ್ತದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪೂರ್ಣಗೊಳಿಸಿದ 40 ವರ್ಷ ವಯೋಮಿತಿಯೊಳಗಿನ ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಆಯ್ಕೆ ಸಂದರ್ಭದಲ್ಲಿ ಕಂಪ್ಯೂಟರ್, ಕನ್ನಡ ಜ್ಞಾನ ಹಾಗೂ ಬೆರಳಚ್ಚು ವೇಗ ಕುರಿತು ಪರೀಕ್ಷೆ ನಡೆಸಲಾಗುವುದು. ಆಯ್ಕೆ ಸಮಿತಿ ತೀರ್ಮಾನವು ಅಂತಿಮ ಆಗಿರುತ್ತದೆ.

ವಾರ್ತಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಇಲ್ಲಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 10ರ ಒಳಗಾಗಿ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಲು ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ;ಸಂ. 94808 41219ನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News