×
Ad

ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣ ಲೇಪಿತ ವಿಗ್ರಹಗಳ ವಿಸರ್ಜನೆಗೆ ನಿಷೇಧ

Update: 2019-06-28 20:55 IST

ಉಡುಪಿ, ಜೂ.28: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ತಡೆಗಟ್ಟುವ ಕ್ರಮವಾಗಿ ಪಿಓಪಿಯಿಂದ ಮಾಡುವ ವಿಗ್ರಹ ಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಉಚ್ಛ ನ್ಯಾಯಾಲಯವು ಮಂಡಳಿಯ ಈ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ.

ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಹಾಗೂ ಇತರೆ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದು ವ್ಯಾಪಕ ಗೊಂಡಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಈ ಕ್ರಮಕ್ಕೆ ಮುಂದಾಗಿದೆ.

ಈ ಬಗ್ಗೆ ಮಂಡಳಿಯು ಅಂತಹ ಜಲಮೂಲಗಳ ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಿಸಿದ್ದು, ವಿಶ್ಲೇಷಣಾ ವರದಿಗಳ ಪ್ರಕಾರ ಅಂತಹ ಜಲಮೂಲ ಗಳು ವಿಗ್ರಹಗಳ ವಿಸರ್ಜನೆಯಿಂದ ಮಾಲಿನ್ಯೊಳ್ಳುತ್ತಿರುವುದು ದೃಢಪಟ್ಟಿದೆ.

ಈ ಬಗ್ಗೆ ಮಂಡಳಿಯು ಅಂತಹ ಜಲಮೂಲಗಳ ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಿಸಿದ್ದು, ವಿಶ್ಲೇಷಣಾ ವರದಿಗಳ ಪ್ರಕಾರ ಅಂತಹ ಜಲಮೂಲ ಗಳು ವಿಗ್ರಹಗಳ ವಿಸರ್ಜನೆಯಿಂದ ಮಾಲಿನ್ಯಗೊಳ್ಳುತ್ತಿರುವುದು ದೃಢಪಟ್ಟಿದೆ. ಈ ಜಲಮಾಲಿನ್ಯವು ವಿಗ್ರಹಗಳಲ್ಲಿ ಉಪಯೋಗಿಸಿದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮತ್ತು ಬಳಸುವ ರಾಸಾಯನಿಕ ಬಣ್ಣಗಳಿಂದ ಆಗುತ್ತಿದ್ದು, ಇದರಿಂದ ಜಲಮೂಲಗಳ ಮೇಲೆ ಅವಲಂಬಿತವಾದ ಪಶು, ಪಕ್ಷಿ, ಪ್ರಾಣಿಗಳು ಮತ್ತು ಇತರೆ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುತ್ತಿದೆ. ಅಲ್ಲದೇ ಪರಿಸರಕ್ಕೆ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ದಕ್ಕೆಯಾಗುವುದರಿಂದ ಇಂತಹ ಕ್ರಿಯೆಗಳನ್ನು ತಡೆಯುವ ಸಲುವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೇ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಪ್ ಪ್ಯಾರಿಸ್‌ನಿಂದ / ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಜಲಗಳಲ್ಲಿ, ನದಿ, ಕಾಲುವೆ/ ಬಾವಿಗಳಲ್ಲಿ ವಿಸರ್ಜಿಸುವುದನ್ನು ರಾಜ್ಯಾದ್ಯಂತ ನಿಷೇಧಿಸಿದೆ.

ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-ಎ ಅನ್ವಯ ದಂಡವನ್ನು (10000 ರೂ. ವರೆಗೆ) ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ.

ಆದುದರಿಂದ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ ಗಣೇಶ ಮೂರ್ತಿಯೊಂದಿಗೆ ಹಬ್ಬ ಆಚರಿಸಿ, ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವ ಮೂಲಕ, ಪಿಒಪಿ ಗಣೇಶ ವಿಗ್ರಹಗಳ ಬಳಕೆ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸಹಕರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News