×
Ad

ಉಡುಪಿಯಲ್ಲಿ ನನ್ನ ಹಾಡು ನನ್ನದು ಸೀಸನ್- 3

Update: 2019-06-28 20:58 IST

ಉಡುಪಿ, ಜೂ.28: ಕಟಪಾಡಿ ದಿಶಾ ಕಮ್ಯೂನಿಕೇಷನ್ಸ್ ಟ್ರಸ್ಟ್, ಕಲಾನಿಧಿ ಸಾಂಸ್ಕೃತಿಕ ಕಲಾಪ್ರಕಾರಗಳ ಸಂಸ್ಥೆ, ರಾಗವಾಹಿನಿ ಉಡುಪಿ, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನಗಳ ಆಶ್ರಯದಲ್ಲಿ ‘ನನ್ನ ಹಾಡು ನನ್ನದು ಸೀಸನ್-3’ರ ಸುಗಮ ಸಂಗೀತ ಗೀತಗಾಯನ ಸ್ಪರ್ಧೆಯು ಜೂ.30ರಂದು ಬೆಳಗ್ಗೆ 9ರಿಂದ ಉಡುಪಿಯ ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾದ ಭವಾನಿಮಂಟಪದಲ್ಲಿ ನಡೆಯಲಿದೆ.

ಬೆಳಗ್ಗೆ 9ಕ್ಕೆ ಸಂಗೀತ ಸ್ಫರ್ಧೆಯ ಪ್ರಥಮ ಸುತ್ತು ಮತ್ತು ಸೆಮಿಫೈನಲ್ ಸ್ಫರ್ಧೆಯನ್ನು ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಉದ್ಘಾಟಿಸುವರು. ಹಿರಿಯ ಸಂಗೀತ ನಿರ್ದೇಶಕ ನಾದವೈಭವಂ ಉಡುಪಿ ವಾಸುದೇವ ಭಟ್ ಅಧ್ಯಕ್ಷತೆ ವಹಿಸುವರು. ಉಡುಪಿ ಬಡಗುಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಸಂಗೀತ ವಿದ್ವಾಂಸೆ ಮಾಧವಿ ಭಟ್ ಪೆರ್ಣಂಕಿಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮ, ಆಕಾಶವಾಣಿ ಕಲಾವಿದೆ ಭಾರತಿ ಟಿ.ಕೆ. ಮುಖ್ಯಅತಿಥಿಗಳಾಗಿ ಭಾಗವಹಿಸಲಿರುವರು.

 ಫೈನಲ್ ಸ್ಫರ್ಧೆಗೆ ಆಯ್ಕೆಯಾಗುವ 10 ಮಂದಿ ಗಾಯಕರಿಗೆ ಆಗಸ್ಟ್ ತಿಂಗಳಲ್ಲಿ ನಡೆಯುವ ನನ್ನ ಹಾಡು ನನ್ನದು ಲೈವ್ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಪ್ರಥಮ ರೂ. 10,000 ನಗದು ಸಹಿತ ಟ್ರೋಫಿ ಮತ್ತು ದ್ವಿತೀಯ 5000 ರೂ. ನಗದು ಸಹಿತ ಟ್ರೋಫಿ ನೀಡಿ ಗೌರವಿಸಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಪ್ರಕಾಶ ಸುವರ್ಣ ಕಟಪಾಡಿ, ರೋಹಿತ್ ಮಲ್ಪೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News