ಟೆಂಪೋ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
Update: 2019-06-28 21:18 IST
ಬೆಂಗಳೂರು, ಜೂ. 28: ವೇಗವಾಗಿ ಬಂದ ಟೆಂಪೋ ಟ್ರಾವೆಲರ್ (ಟಿಟಿ) ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಬಿಎಂಟಿಸಿ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತಪುರ ಗೇಟ್ ಬಳಿ ನಡೆದಿದೆ.
ಯಲಹಂಕದ ಅನಂತಪುರದ ಹನುಮಂತಪ್ಪ(39) ಎಂಬುವರು ಮೃತ ಬಿಎಂಟಿಸಿ ಚಾಲಕ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಮಧ್ಯಾಹ್ನ 2ರ ವೇಳೆ ಕೆಲಸ ಮುಗಿಸಿಕೊಂಡು ಯಲಹಂಕ ಬಸ್ ಘಟಕದಿಂದ ಮನೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಅನಂತಪುರ ಗೇಟ್ ಬಳಿ ಟೆಂಪೋ ಟ್ರಾವೆಲರ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಹನುಮಂತಪ್ಪ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು ಟೆಂಪೋ ಟ್ರಾವೆಲರ್ ವಶಪಡಿಸಿಕೊಂಡು ಚಾಲಕನ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.