ಕ್ಲಬ್ ಮೇಲೆ ಸಿಸಿಬಿ ದಾಳಿ: 17 ಮಂದಿಯ ಬಂಧನ
Update: 2019-06-28 21:19 IST
ಬೆಂಗಳೂರು, ಜೂ.28: ಜೂಜಾಟ ನಡೆಸುತ್ತಿದ್ದ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 17 ಮಂದಿಯನ್ನು ಬಂಧಿಸಿ, 54 ಸಾವಿರ ರೂ. ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಣಸವಾಡಿ ಮುಖ್ಯರಸ್ತೆಯ ಚೇರ್‌ಮನ್ ಲೇಔಟ್‌ನ ಮನೆಯೊಂದರಲ್ಲಿ 7 ಸ್ಟಾರ್ ಅಸೋಸಿಯೇಷನ್‌ನ ರಿಕ್ರಿಯೇಷನ್ ಕ್ಲಬ್‌ನಲ್ಲಿ ಜೂಜಾಟ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ, 17 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರು ಜೂಜಾಟಕ್ಕೆ ಪಣವಾಗಿಟ್ಟಿದ್ದ 54 ಸಾವಿರ ರೂ. ನಗದು, ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.