ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕಾ ಪ್ರವಾಸ
ಬೆಂಗಳೂರು, ಜೂ.28: ಗ್ರಾಮವಾಸ್ತವ್ಯ, ಸಭೆ, ಸಮಾರಂಭಗಳಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ವಾರ ಬಿಡುವು ಪಡೆದುಕೊಂಡು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಯೊಂದಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕೆಲ ಅಧಿಕಾರಿಗಳು ಅವರೊಟ್ಟಿಗೆ ತೆರಳಿದ್ದಾರೆ. ದೇವೇಗೌಡರು ಎರಡು ದಿನಗಳ ಮಟ್ಟಿಗೆ ಅಮೆರಿಕದಲ್ಲಿದ್ದು, ಬಳಿಕ ರಾಜಧಾನಿಗೆ ಹಿಂದಿರುಗಲಿದ್ದಾರೆ.
ಅಮೆರಿಕದಲ್ಲಿ ಆಯೋಜಿಸಿರುವ ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ದೇವೇಗೌಡರು. ಸಚಿವ ಡಿ.ಕೆ ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಚಿವರು, ಶಾಸಕರಿಗೆ ಆಹ್ವಾನ ನೀಡಲಾಗಿದೆ. ಅಮೆರಿಕಾಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು, ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಶ್ರೀಗಳು ಸೇರಿದಂತೆ ಅನೇಕ ಮಠಾಧೀಶರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.
ಇದು ಸಂಪೂರ್ಣ ಖಾಸಗಿ ಭೇಟಿಯಾಗಿದ್ದು, ಸರಕಾರ ಯಾವುದೇ ವೆಚ್ಚ ಭರಿಸುತ್ತಿಲ್ಲ ಎಂದು ತಿಳಿಸಿದ್ದಾರೆ.