×
Ad

ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Update: 2019-06-28 22:50 IST

ಬೆಂಗಳೂರು, ಜೂ.28: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೃಷಿ ಪ್ರಶಸ್ತಿಗಳಿಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯಮಟ್ಟದ ಪ್ರಶಸ್ತಿಗಳು: ಎಚ್.ಡಿ.ದೇವೇಗೌಡ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ. ಸಿ.ಬೈರೇಗೌಡ ಪ್ರಶಸ್ತಿ, ಡಾ.ಎಂ.ಎಚ್.ಮರೀಗೌಡ ಪ್ರಶಸ್ತಿ, ಅತ್ಯುನ್ನತ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ/ರೈತ ಮಹಿಳೆ ಪ್ರಶಸ್ತಿ, ಡಾ.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ.

ಜಿಲ್ಲಾ ಮಟ್ಟದ ಪ್ರಶಸ್ತಿಗಳು: ಅತ್ಯುತ್ತಮ ರೈತ ಪ್ರಶಸ್ತಿ, ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ. ತಾಲೂಕು ಮಟ್ಟದ ಪ್ರಶಸ್ತಿಗಳು: ಅತ್ಯುತ್ತಮ ಯುವ ರೈತ ಪ್ರಶಸ್ತಿ ಹಾಗೂ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜು.31 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 080-2341 8883 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News