×
Ad

ಧ್ವನಿ ಬೆಳಕು ಸಂಯೋಜಕರ ಸಂಘಟನೆಯಿಂದ ಜು.1ಕ್ಕೆ ಕಾರ್ಮಿಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Update: 2019-06-28 23:09 IST

ಉಡುಪಿ, ಜೂ.28: ಉಡುಪಿ ಜಿಲ್ಲಾ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಎಂಟನೇ ವಾರ್ಷಿಕ ಮಹಾಸಭೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.1ರಂದು ಬ್ರಹ್ಮಾವರದ ಹೊಟೇಲ್ ಆಶ್ರಯದ ಹವಾನಿಯಂತ್ರಿತ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ಕೆ.ಬಾಲಕೃಷ್ಣ ಪೂಜಾರಿ ತಿಳಿಸಿದ್ದಾರೆ.

ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಗೆ ರಾಜ್ಯ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಸಂಘಟನಾ ಕಾರ್ಯದರ್ಶಿಯವರ ಜೊತೆಗೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸುವರು ಎಂದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಆರು ವಲಯಗಳ 12 ಮಕ್ಕಳಿಗೆ ವಿದ್ಯಾರ್ಥಿ ವೇತನ, ಓರ್ವ ವಿದ್ಯಾರ್ಥಿಗೆ ಉನ್ನತ ಶಿಕ್ಷಣಕ್ಕಾಗಿ ಧನಸಹಾಯ, ಆರು ಮಂದಿ ಹಿರಿಯ ಕಾರ್ಮಿಕರಿಗೆ, ಹಿರಿಯ ಸದಸ್ಯರಿಗೆ ಸನ್ಮಾನ, ಅಕಸ್ಮಿಕ ಅಪಘಾತಕ್ಕೀಡಾದ ಸದಸ್ಯರ ಕುಟುಂಬಕ್ಕೆ ಧನಸಹಾಯ ನೀಡಲಾಗುವುದು ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಶಿವರಾಜ್ ಮಲ್ಲಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ದಾಮೋದರ್, ಜಿಲ್ಲಾ ಕೋಶಾಧಿಕಾರಿ ಸಂತೋಷ್ ಶೆಟ್ಟಿಗಾರ್, ರಾಮಕೃಷ್ಣ ಕುಂದರ್, ಚಂದ್ರಶೇಖರ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News