ಉಡುಪಿ ಜಿಲ್ಲಾ ಬಿಜೆಪಿ ಸದಸ್ಯತಾ ಕಾರ್ಯಾಗಾರ
Update: 2019-06-28 23:11 IST
ಉಡುಪಿ, ಜೂ.28: ಭಾರತೀಯ ಜನತಾ ಪಾರ್ಟಿ ಸಂಘಟನಾ ಪರ್ವ ಸದಸ್ಯತಾ ಅಭಿಯಾನ-2019 ಇದರ ಉಡುಪಿ ಜಿಲ್ಲಾ ಕಾರ್ಯಾಗಾರವು ಜೂ.29ರ ಶನಿವಾರ ಅಪರಾಹ್ನ 2:30ಕ್ಕೆ ಕಡಿಯಾಳಿಯ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಹಾಗೂ ಸದಸ್ಯತಾ ಅಭಿಯಾನದ ರಾಜ್ಯ ಸಂಚಾಲಕ ಎನ್.ರವಿಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು ಹಾಗೂ ಪ್ರಮುಖರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.