ಪಾಕ್‌ಗೆ ಅಫ್ಘಾನಿಸ್ತಾನದ ಸವಾಲು

Update: 2019-06-28 18:40 GMT

ಲೀಡ್ಸ್, ಜೂ. 28: ಪಾಕಿಸ್ತಾನ ಮತ್ತೆ ಗೆಲುವಿನ ಹಳಿಗೆ ಮರಳಿದ್ದು, ಶನಿವಾರ ನಡೆಯಲಿರುವ ವಿಶ್ವಕಪ್‌ನ ಪಂದ್ಯದಲ್ಲಿ ದುರ್ಬಲ ಅಫ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವಿನ ಕಡೆಗೆ ನೋಡುತ್ತಿದೆ. ಅಫ್ಘಾನಿಸ್ತಾನ ಈ ತನಕ ಒಂದು ಪಂದ್ಯದಲ್ಲೂ ಗೆಲುವು ದಾಖಲಿಸಿಲ್ಲ. ಭಾರತದ ವಿರುದ್ಧ ಗೆಲುವಿನತ್ತ ಹೆಜ್ಜೆ ಇರಿಸಿದ್ದರೂ, ಕೊನೆಯ ಕ್ಷಣದಲ್ಲಿ ಒತ್ತಡಕ್ಕೊಳಗಾಗಿ ವಿಕೆಟ್‌ಗಳನ್ನು ಕೈ ಚೆಲ್ಲಿ ಗೆಲುವಿನ ಅವಕಾಶವನ್ನು ಕಳೆದುಕೊಂಡಿತ್ತು.

ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ದಕ್ಷಿಣ ಆಫ್ರಿಕ ಮತ್ತು ನ್ಯೂಝಿಲ್ಯಾಂಡ್ ವಿರುದ್ಧ ಜಯ ಗಳಿಸಿ ಸೆಮಿಫೈನಲ್‌ಗೇರುವ ಅವಕಾಶವನ್ನು ಜೀವಂತವಾಗಿರಿಸಿದೆ.

ನ್ಯೂಝಿಲ್ಯಾಂಡ್ ವಿರುದ್ಧ 6 ವಿಕೆಟ್‌ಗಳ ಅಂತರದಲ್ಲಿ ಪಾಕಿಸ್ತಾನ ಜಯ ಗಳಿಸಿತ್ತು. ಬಾಬರ್ ಆಝಮ್ ಶತಕ ಮತ್ತು ಶಾಹಿನ್ ಅಫ್ರಿದಿ 5 ವಿಕೆಟ್‌ಗಳನ್ನು ಉಡಾಯಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದ್ದರು.

ಪಾಕಿಸ್ತಾನ ಗೆಲುವಿನ ಹಳಿಗೆ ಮರಳಿದ್ದರೆ ಆರಂಭದಲ್ಲಿ ಬಲಿಷ್ಠ ತಂಡವಾಗಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್‌ನ ಶಕ್ತಿ ಕುಂದಿದೆ. ಒಂದು ವೇಳೆ ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡದ ವಿರುದ್ಧ ಗೆಲುವು ದಾಖಲಿಸಿದರೆ ಪಾಕಿಸ್ತಾನಕ್ಕೆ ಸೆಮಿಫೈನಲ್‌ಗೇರುವ ಅವಕಾಶ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News